ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸುತ್ತಿರುವ ಭಾರತ್ ಜೋಡೋ ಯಾತ್ರಾಗೆ ಬೇಕಾಗಿರುವ ಸಿದ್ಧತೆಗಳ ಕುರಿತು ಚರ್ಚಿಸಲು ಇಂದು ಎಐಸಿಸಿ ಕಾರ್ಯದರ್ಶಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಎಐಸಿಸಿ ಉಸ್ತುವಾರಿಗಳು ಇಂದು ಜಿಲ್ಲೆಯ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿದ್ದು ಎಬಿಡಿ ಟ್ರಸ್ಟ್ ನ ಅಧ್ಯಕ್ಷರಾದ ರಾಜೀವ್ ಗೌಡ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ.
ಶಿಡ್ಲಘಟ್ಟ ತಾಲೂಕಿನಲ್ಲಿ ಬಡವರ ಬಂಧು, ಸಾಮಾಜ ಸೇವಕರೆಂದು ಸಾಕಷ್ಟು ಹೆಸರುವಾಸಿಯಾಗಿರುವ ಎಬಿಡಿ ಗ್ರೂಪ್ ಅಧ್ಯಕ್ಷರಾದ ರಾಜೀವ್ ಗೌಡ ಮುಂಭಾರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಯೆಂದು ಗುರುತ್ತಿಸಿಕೊಂಡಿದ್ದು ಸಾಕಷ್ಟು ಕ್ರೀಯಾಶೀಲರಾಗಿದ್ದಾರೆ.
ಸದ್ಯ ಇಂದು ರಾಷ್ಟ್ರೀಯ ಎಐಸಿಸಿ ಕಾರ್ಯದರ್ಶಿಗಳಾದ ಅಭಿಶೇಕ್ ದತ್ ಹಾಗೂ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಕೇಶವರೆಡ್ಡಿ ಹಾಗೂ ಕಾಂಗ್ರೆಸ್ ಮುಖಂಡರು ಶಿಡ್ಲಘಟ್ಟ ನಗರಕ್ಕೆ ಭೇಟಿ ಕೊಟ್ಟಿದ್ದು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈಗಾಗಲೇ ಶಿಡ್ಲಘಟ್ಟ ತಾಲೂಕಿನಿಂದ ಎಬಿಡಿ ಟ್ರಸ್ಟ್ ಕಾಂಗ್ರೆಸ್ ಪಕ್ಷದಿಂದ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜನತೆಯಲ್ಲಿ ಬಹಳಷ್ಟುಗುರುತ್ತಿಸಿಕೊಂಡಿದ್ದಾರೆ.ಸದ್ಯ ಇಂದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಎಬಿಡಿ ಟ್ರಸ್ಟ್ ಅಧ್ಯಕ್ಷರ ಜೊತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರು ಭೇಟಿ ನೀಡಿ ಚರ್ಚೆ ನಡೆಸಿದ್ದು ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.
PublicNext
07/09/2022 10:59 am