ಕಾರವಾರ: ಸಂಪುಟ ಸಹೋದ್ಯೋಗಿ, ಅರಣ್ಯ, ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತ ತರಿಸಿದೆ ಎಂದು ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಉತ್ತರ ಕರ್ನಾಟಕ ಗಟ್ಟಿ ಧ್ವನಿಯಾಗಿದ್ದ ಉಮೇಶ್ ಕತ್ತಿ ಅವರು ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ ರೈತ ವರ್ಗದ ಅಭಿವೃದ್ಧಿ ಶ್ರಮಿಸಿದ್ದರು. ಶ್ರೀಯುತರ ನಿಧನದಿಂದ ರಾಜ್ಯ ಓರ್ವ ಮುತ್ಸದ್ಧಿ ಜನನಾಯಕನನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ಭಗವಂತ ಉಮೇಶ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ, ಅಗಲಿಕೆಯು ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾರ್ ತಿಳಿಸಿದ್ದಾರೆ.
PublicNext
07/09/2022 11:04 am