ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಉಮೇಶ ಕತ್ತಿ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ!

ಬೆಳಗಾವಿ: ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಚಿವ ಉಮೇಶ ಕತ್ತಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಅವರೊಬ್ಬ ಕ್ರಿಯಾಶೀಲ, ಮುತ್ಸದ್ದಿ ರಾಜಕೀಯ ನಾಯಕರಾಗಿದ್ದರು. ಸ್ವಭಾವದಲ್ಲೂ ಒಳ್ಳೆಯವರಾಗಿದ್ದ ಅವರ ನಿಧನದಿಂದ ಈ ನಾಡಿಗೆ, ರಾಜಕೀಯ ಹಾಗೂ ಸಹಕಾರ ಕ್ಷೇತ್ರಕ್ಕೆ ಅಪಾರ ಹಾನಿಯಾಗಿದೆ. ವಿವಿಧ ಸಚಿವ ಸ್ಥಾನಗಳನ್ನು ಸಮರ್ಥವಾಗಿ ನಿಭಾಯಿಸಿದ ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದು ಅವರಿಂದ ಅಪಾರ ಅಭಿವೃದ್ಧಿ ಕಾರ್ಯಗಳಾಗಿವೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Edited By : Manjunath H D
PublicNext

PublicNext

07/09/2022 04:54 pm

Cinque Terre

30.44 K

Cinque Terre

0

ಸಂಬಂಧಿತ ಸುದ್ದಿ