ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಪಾಂಡವಪುರದ ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ

ಮಂಡ್ಯ: ಪಾಂಡವಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಕೆಂಪೇಗೌಡ(96) ಅವರು ಬುಧವಾರ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆ.ಕೆಂಪೇಗೌಡ ಅವರು ಇಂದು ಬೆಳಗಿನ ಜಾವ ಸ್ವಗ್ರಾಮದ ತೋಟದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಕೆಂಪೇಗೌಡ, 1983ರಲ್ಲಿ ಜನತಾಪರಿವಾರದಿಂದ (JNP) ಗೆಲವು ಸಾಧಿಸಿದ್ದರು. 1985ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಹಾಗೆಯೇ 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಜನ ಸೇವೆ ಮಾಡಿದ್ದರು.

ಅದಾದ ನಂತ ಹಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಕೆಂಪೇಗೌಡರು ದೂರ ಉಳಿದಿದ್ದರು. ಇಂದು ಮಧ್ಯಾಹ್ನ 3 ರಿಂದ 4 ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಂಪೇಗೌಡರ ನಿಧನಕ್ಕೆ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಂತಾಪ ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

08/09/2022 09:42 am

Cinque Terre

24.56 K

Cinque Terre

0

ಸಂಬಂಧಿತ ಸುದ್ದಿ