ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ : ಅತಿವೃಷ್ಟಿ ಸುಳಿಯಲ್ಲಿ ಸಿಲುಕಿದ ರೈತರಿಗೆ ಗುಡ್ ನ್ಯೂಸ್ ಸಿಗಲಿದೆ ಶೂನ್ಯ ಬಡ್ಡಿ ಸಾಲ

ದೆಹಲಿ : ಅತಿವೃಷ್ಟಿ ನಡುವೆ ನಲುಗಿ ಹೋಗಿರುವ ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ ಹೊಸದಾಗಿ 3 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಅವರು, 2022-23 ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಅದರಂತೆ ಹೊಸದಾಗಿ 3 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

Edited By : Abhishek Kamoji
PublicNext

PublicNext

09/09/2022 03:48 pm

Cinque Terre

177.43 K

Cinque Terre

4

ಸಂಬಂಧಿತ ಸುದ್ದಿ