ಹೈದರಾಬಾದ್: ಹೈದರಾಬಾದ್‌ನಲ್ಲಿ ಶುಕ್ರವಾರ ನಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಅವರ ರ‍್ಯಾಲಿ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ವೇದಿಕೆ ಮೇಲೇರಿ ಮೈಕ್‍ನ್ನು ಸ್ಟ್ಯಾಂಡ್ ನಿಂದ ಎಳೆದಾಡಿದ ಘಟನೆ ನಗರದಲ್ಲಿ ನಡೆದಿದೆ.
ಹಿಮಾಂತ ಬಿಸ್ವಾ ಶರ್ಮಾ ಇಂದು ಮುಂಜಾನೆ ಹೈದರಾಬಾದ್‌ನ ಪ್ರಮುಖ ದೇವಸ್ಥಾನವೊಂದಕ್ಕೆ ಭೇಟಿ ನೀಡಿ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ರ‍್ಯಾಲಿ ವೇಳೆ ವೇದಿಕೆ ಮೇಲೆ ಬಂದ ಕೆಸಿಆರ್ ಪಕ್ಷದ ಶಾಲು ಧರಿಸಿದ್ದ ವ್ಯಕ್ತಿ ಏಕಾಏಕಿ ಮೈಕ್ ಎಳೆದಾಡಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಹಿಮಾಂತ ಬಿಸ್ವಾ ಶರ್ಮಾ ಗಾಬರಿಗೊಂಡಂತೆ ಕಂಡು ಬಂತು. ಬಳಿಕ ಕೂಡಲೇ ವೇದಿಕೆ ಮೇಲಿದ್ದವರು ಅಪರಿಚಿತ ವ್ಯಕ್ತಿಯನ್ನು ವೇದಿಕೆಯಿಂದ ಕೆಳಗಿಳಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
PublicNext
09/09/2022 10:34 pm