ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷದಿಂದ ಪಕ್ಷಕ್ಕೆ ಹಾರುವ ಪಕ್ಷಾಂತರ ಪರ್ವ ಸದ್ಯ ಜೋರಾಗಿದೆ. ಕೆಲ ದಿನಗಳ ಹಿಂದೆ ಮಾಜಿ ಪರಿಷತ್ ಸದಸ್ಯ ಎಂ.ಡಿ ಲಕ್ಷ್ಮೀನಾರಾಯಣ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ನಡೆದಿದ್ದರು. ಇದೀಗ ಅವರು ಸೆ.10ರ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 10-09-2022ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಅಂದಹಾಗೆ ದಿನಾಂಕ 31-08-2022ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದ ಅವರು, ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು, ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ತಿಳಿಸಿದ್ದರು. ಈ ಬಳಿಕ ಇದೀಗ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರೋದಾಗಿ ಘೋಷಿಸಿದ್ದಾರೆ.
PublicNext
10/09/2022 08:01 am