ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರಿಗೆ ಮಸಾಲೆ ದೋಸೆ ಪಾರ್ಸಲ್ ಕಳುಹಿಸಿದ್ದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ್ದರು. ಆದರೆ ಪಾರ್ಸಲ್ ಕಳುಹಿಸಿ 24 ತಾಸು ಕಳೆದರೂ ನನಗೆ ಇನ್ನೂ ದೋಸೆ ಪಾರ್ಸಲ್ ಬಂದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, 'ಕಾಂಗ್ರೆಸ್‌ವರು ನನ್ನ ಮನೆಗೆ ಮಸಾಲೆ ದೋಸೆ ಪಾರ್ಸೆಲ್ ಕಳುಹಿಸಿದ್ದಾರೆ ಎಂದು ಘೋಷಿಸಿ 24 ಗಂಟೆಗಳಿಗಿಂತ ಹೆಚ್ಚು ಸಮಯವಾಗಿದೆ. ನಾನು ಅದನ್ನು ಇನ್ನೂ ಸ್ವೀಕರಿಸಿಲ್ಲ. ಇಲ್ಲೂ ಮೋಸ ಮಾಡಿದ್ದಾರೆ. ಅವರಿಗೆ ಸರಿಯಾಗಿ ದೋಸೆ ಕೊಡಲು ಸಾಧ್ಯವಿಲ್ಲ. ಹೀಗಿದ್ದರೂ ಅವರು ಉತ್ತಮ ಆಡಳಿತ ನೀಡುವ ಕನಸು ಕಾಣುತ್ತಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‌ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ ಅಂತ ವೀಡಿಯೋ ಸಮೇತ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಅಲ್ಲದೆ ವಿರೋಧ ಪಕ್ಷಗಳು ಸಂಸದರ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದವು.
PublicNext
12/09/2022 04:08 pm