ಬೆಂಗಳೂರು: ಪುಂಡು ಪೋಕರಿಯಂತೆ ಮಾತನಾಡಿದ್ರೆ ಗೌರವ ಉಳಿಯುವುದಿಲ್ಲ ಎಂದು ಬಿಜೆಪಿ ಸರ್ಕಾರದ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ಪುಂಡು ಪೋಕರಿಯಂತೆ ಮಾತಾಡಿದ್ರೆ ಗೌರವ ಉಳಿಯುವುದಿಲ್ಲ ಎಂದು ಸಿಟಿ ರವಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ ಸಿ.ಟಿ ರವಿ ತಮ್ಮ ಸಂಸ್ಕಾರವೇನು ಎಂಬುವುದು ತೋರಿಸಿದ್ದಾರೆ.
ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಈ ಸ್ಥಾನದ ಘನತೆಗೆ ತಕ್ಕಂತೆ ಮಾತಾಡಲಿ ಎಂದು ಕಿಡಿಕಾರಿದ್ದಾರೆ.
ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ ಸಿಟಿ ರವಿಗೂ ಈ ಚಟವಿದೆ. ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಸಿಟಿ ರವಿ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
PublicNext
13/09/2022 04:20 pm