ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಎಫ್ ಐ ಆರ್ ದಾಖಲಿಸಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮತ್ತು ಕುಟುಂಬಸ್ಥರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (ಬಿಎಸ್‌ವೈ), ಅವರ ಪುತ್ರ ಬಿವೈ ವಿಜಯೇಂದ್ರ ಮತ್ತು ಇತರ ಕುಟುಂಬ ಸದಸ್ಯರು ಹಾಗೂ ಹಾಲಿ ಸಚಿವರ ವಿರುದ್ಧ ಖಾಸಗಿ ವ್ಯಕ್ತಿಯ ಭ್ರಷ್ಟಾಚಾರದ ದೂರಿಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿತ್ತು.
ಸದ್ಯ ಕೋರ್ಟ್ ಆದೇಶದ ಮೇರೆಗೆ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ತಿಳಿದಿಬಂದಿದೆ.
PublicNext
17/09/2022 12:39 pm