ಲಕ್ನೋ: ಸಮಾಜವಾದಿ ಪಕ್ಷದ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಇಂದು ಲಕ್ನೋದಲ್ಲಿ ಉತ್ತರ ಪ್ರದೇಶದ ವಿಧಾನಸಭಾ ಅಧಿವೇಶನಕ್ಕೆ ‘ಪಾದಯಾತ್ರೆ’ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ.
ಇದಾದ ನಂತರ ಉತ್ತರ ಪ್ರದೇಶ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಇಂದು ಲಕ್ನೋದ ಬೀದಿಗಳಲ್ಲಿ ಹೈಡ್ರಾಮಾ ನಡೆಯಿತು. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ಹಜರತ್‌ಗಂಜ್ ಪ್ರದೇಶದ ಸಮಾಜವಾದಿ ಪಕ್ಷದ ಕಚೇರಿಯಿಂದ ಉತ್ತರ ಪ್ರದೇಶದ ಅಸೆಂಬ್ಲಿಗೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದರು. ಪೊಲೀಸರ ಕ್ರಮ ಖಂಡಿಸಿ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ಕೂಡಲೇ ಧರಣಿ ಸತ್ಯಾಗ್ರಹ ನಡೆಸಿದರು.
ಪಾದಯಾತ್ರೆ ಮತ್ತು ಪ್ರತಿಭಟನೆಗೆ ಎಸ್ಪಿ ನಾಯಕ ಅಖಿಲೇಶ್ ಯಾದವ್ ಅನುಮತಿ ಪಡೆದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಆರೋಪಿಸಿದ್ದಾರೆ. ಅವರನ್ನು ಇಲ್ಲಿ ತಡೆದು ನಿಲ್ಲಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಅವರಿಗೆ ಗೊತ್ತುಪಡಿಸಿದ ಮಾರ್ಗದಲ್ಲಿ ತೆರಳಿದರೆ ಸಂಚಾರ ದಟ್ಟಣೆಯ ಸಮಸ್ಯೆ ಇರುವುದಿಲ್ಲ ಎಂದು ಜೆಟಿ ಸಿಪಿ ಮಪಿಯೂಷ್ ಮೊರ್ಡಿಯಾ ಹೇಳಿದ್ದಾರೆ.
ಈ ಪಾದಯಾತ್ರೆಯ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷದ ಎಲ್ಲಾ ಪ್ರಶ್ನೆಗಳನ್ನು ಪರಿಹರಿಸಲಾಗುವುದು ಎಂದಿದ್ದಾರೆ.
PublicNext
19/09/2022 01:04 pm