ನವದೆಹಲಿ: ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬಿಜೆಪಿ ಸೇರ್ಪಡೆಗೊಳ್ಳುವ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.
"ಅಮರಿಂದರ್ ಸಿಂಗ್ ಅವರು ತಮ್ಮ ಪಿಎಲ್ಸಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ" ಎಂದು ಪಿಎಲ್ಸಿ ವಕ್ತಾರ ಪ್ರೀತ್ಪಾಲ್ ಸಿಂಗ್ ಹೇಳಿದ್ದಾರೆ. ಸೆಪ್ಟೆಂಬರ್ 12 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ನಂತರ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಬಿಜೆಪಿ ಸೇರುವುದಾಗಿ ಘೋಷಿಸಿದ್ದರು.
PublicNext
19/09/2022 03:34 pm