ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಾಬ್ ಮಾಜಿ ಸಿಎಂ ಬಿಜೆಪಿಗೆ ಎಂಟ್ರಿ

ನವದೆಹಲಿ: ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ಬಳಿಕ ಪಂಜಾಬ್ ಲೋಕ ಕಾಂಗ್ರೆಸ್ (PLC) ಎಂಬ ತಮ್ಮದೇ ಹೊಸ ಪಕ್ಷ ಕಟ್ಟಿದ್ದರು. ಇದೀಗ ಅವರು ತಮ್ಮ ಹೊಸ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಸಜ್ಜಾಗಿದ್ದು, ಇಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರಿದ್ದಾರೆ.

80 ವರ್ಷದ ಅಮರೀಂದರ್ ಸಿಂಗ್ ಇಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಪಂಜಾಬ್ ಲೋಕ ಕಾಂಗ್ರೆಸ್ ಗೆ ಸೇರ್ಪಡೆಗೊಂಡ 7 ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದರು ಕೂಡ ಇಂದು ಬಿಜೆಪಿಗೆ ಸೇರಿದ್ದಾರೆ. ಈ ವೇಳೆ ನರೇಂದ್ರ ಸಿಂಗ್ ತೋಮರ್ ಹಾಗೂ ಕಾನೂನು ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

19/09/2022 07:22 pm

Cinque Terre

38.95 K

Cinque Terre

10