ಕಲಬುರಗಿ: ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮ ಬಯಲಿಗೆಳೆಯಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಜ್ಜಾಗಿದ್ದು, ನಾಳೆ(ಗುರುವಾರ) ಅಧಿವೇಶನದಲ್ಲಿ ದಾಖಲೆಗಳನ್ನ ಬಿಡುಗಡೆ ಮಾಡಲಿದ್ದಾರೆ.
ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಈ ಕುರಿತು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಎಚ್‌ಡಿಕೆ, ಯಾವ ಸಚಿವರು, ಯಾವ ಅಕ್ರಮ ಎಂಬುದೆಲ್ಲವನ್ನೂ ನಾಳೆ ಸದನದಲ್ಲಿ ಬಹಿರಂಗ ಮಾಡುವೆ. ನಾನು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಲ್ಲ, ಹಿಟ್ ಆ್ಯಂಡ್ ರನ್ ಅಲ್ಲ.
ನನ್ನ ಬಗ್ಗೆ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿರುವ ಆ ಸಚಿವರಿಗೆ ಇದು ನಮ್ಮ ಸ್ಯಾಂಪಲ್. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.
ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡು ಮಾಡಿರುವ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆ ಎಳೆಯುವೆ ಎಂದು ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
PublicNext
21/09/2022 03:29 pm