ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ 'ಶೇ 40 ಕಮಿಷನ್ ಸರ್ಕಾರ'ವೆಂದು ಆರೋಪಿಸಿ 'ಪೇ ಸಿಎಂ' (PayCM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷ ಅಭಿಯಾನ ಆರಂಭಿಸಿದೆ. ಇದಕ್ಕೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಅದಲ್ಲೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೋಟೋ ಹಾಕಿ ಪೋಸ್ಟರ್ ಸಮರ ಶುರು ಮಾಡಿದೆ.
ಸ್ಕ್ಯಾನ್ ಕೋಡ್ ಮೇಲೆ ಸಿದ್ದರಾಮಯ್ಯ, ಡಿಕೆಶಿ ಚಿತ್ರ ಹಾಕಿ, ರಾಜ್ಯ ಲೂಟಿ ಮಾಡಿದ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ ಅಂತ ಟಾಂಗ್ ಕೊಟ್ಟಿದೆ.
ಸಮಾಜವಾದಿ ಮುಖವಾಡ ಧರಿಸಿ ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಗಂಜಿ ಗಿರಾಕಿಗಳಿಂದ ದೂರವಿರಿ ಎಂದು ಅಭಿಯಾನ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ. ಇದನ್ನು ಹಿರಿಯ ನಾಯಕರ ಗಮನಕ್ಕೆ ತಂದು ಅಭಿಯಾನ ನಡೆಸಲಿದೆ ಎನ್ನಲಾಗಿದೆ.
ಸಾರ್ವಜನಿಕರ ಗಮನಕ್ಕೆ ನಿಮ್ಮ ಹತ್ತಿರ ಇವರನ್ನು ಸುಳಿದಾಟಲು ಬಿಡಬೇಡಿ ಎಂದು ಫೋಟೋ ಮೇಲೆ ಬರೆದಿರುವ ಬಿಜೆಪಿ, ಬೇಡವಾಗಿದ್ದಾರೆ ಹೆಸರಿನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೋಟೋ ಪ್ರಕಟಿಸಿದೆ. ಅಷ್ಟೇ ಅಲ್ಲದೆ ನಾಯಕರಿಗೆ ರಿಡೂ ಸಿದ್ದರಾಮಯ್ಯ, ಇಡಿ ಡಿಕೆಶಿ ಅಂತ ಕಾಲೆಳೆದು ಪೋಸ್ಟರ್ ರಚಿಸಿದೆ.
PublicNext
21/09/2022 05:42 pm