ಬೆಂಗಳೂರು : ಸದ್ದು ಮಾಡಿದ ‘ಪೇ ಸಿಎಂ’ ನ್ನು ಸದ್ಯ ರಾಜ್ಯ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ!ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ “ಪೇ ಸಿಎಂ’ ಡಿಜಿಟಲ್ “ಪೇ ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ (ಸಿಎಂಆರ್ ಎಫ್) ಎಂಬ ಡಿಜಿಟಲ್ ಆ್ಯಪ್ ಅಭಿವೃದ್ಧಿಪಡಿಸಿ, ಆ ಮೂಲಕ ಅಧಿಕೃತಗೊಳಿಸಲು ಮುಂದಾಗಿದೆ.ಇದರೊಂದಿಗೆ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ ಇದಾಗಿದೆ ಎಂದು ಮೂಲಗಳು ತಿಳಿಸಿವೆ.
“ಪೇ ಸಿಎಂ’ ಹೆಸರಿನಡಿ ಡಿಜಿಟಲ್ ಆ್ಯಪ್ ಅಭಿವೃದ್ಧಿಪಡಿಸಿ, ಆ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ನೆರವು ನೀಡಲು ಅನುವಾಗುವಂತೆ ಸ್ವತಃ ಆಡಳಿತ ಪಕ್ಷದ ಸದಸ್ಯ ಎಂ.ಕೆ. ಪ್ರಾಣೇಶ್ ಸಭಾಪತಿಗಳಿಗೆ ಗುರುವಾರ ಮನವಿ ಮಾಡಿದ್ದಾರೆ. ಇದಕ್ಕೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
PublicNext
23/09/2022 05:28 pm