ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ : 90 ಶಾಸಕರ ರಾಜೀನಾಮೆ

ಜೈಪುರ : ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ನ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವುದರೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆಯೂ ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪಕ್ಷದಲ್ಲಿ ಭಾರೀ ಬಿಕ್ಕಟ್ಟು ಉಂಟಾಗಿದ್ದು, ಗೆಹ್ಲೋಟ್ ಬಣದ 90 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅಶೋಕ್ ಗೆಹ್ಲೋಟ್ ಅವರು ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ಉಂಟಾಗಿದೆ.ಗೆಹ್ಲೋಟ್ ಬೆಂಬಲಿಗ ಶಾಸಕರು ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅಜಯ್ ಮಾಕೇನ್ ಮಾತುಕತೆಗೆ ಪ್ರಯತ್ನಿಸಿದರೂ ಅವರು ಭೇಟಿಗೆ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು ಹೇಳಿದ್ದರು. ಈ ಕಾರಣಕ್ಕೆ ಸಚಿನ್ ಪೈಲಟ್ ಅವರೇ ಮುಂದಿನ ಸಿಎಂ ಎಂದು ಚರ್ಚೆಯಾಗಿತ್ತು. ಆದರೆ ಪೈಲಟ್ ಗೆ ಸ್ಥಾನ ನೀಡುವುದು ಬೇಡ ಎನ್ನುವ ಕಾರಣಕ್ಕೆ ರಾಜೀನಾಮೆಯ ಹೈಡ್ರಾಮಾ ನಡೆದಿದೆ. ನಮ್ಮಲ್ಲಿಯೇ ಯಾರಾದರೂ ಅನುಭವಿ ರಾಜಕಾರಣಿಗಳಿಗೆ ಈ ಸ್ಥಾನ ನೀಡಿ ಎಂದು ಪ್ರತಿಭಟನೆ ಶುರುವಾಗಿದೆ. ಇಲ್ಲದೇ ಹೋದಲ್ಲಿ ಹಲವು ಶಾಸಕರು ಕಾಂಗ್ರೆಸ್ ತೊರೆಯುವುದಾಗಿಯೂ ಹೈಕಮಾಂಡ್ ಗೆ ಎಚ್ಚರಿಕೆ ನೀಡಲಾಗಿದೆ.

ಈ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಲಿದ್ದಾರೆ.ಇದರ ಹಿಂದೆ ಅಶೋಕ್ ಗೆಹ್ಲೋಟ್ ಕೈವಾಡವಿದೆಯೇ ಎಂಬ ಚರ್ಚೆಗಳೂ ಶುರುವಾಗಿದೆ.

Edited By : Nirmala Aralikatti
PublicNext

PublicNext

26/09/2022 02:21 pm

Cinque Terre

49.82 K

Cinque Terre

6

ಸಂಬಂಧಿತ ಸುದ್ದಿ