ಬೆಂಗಳೂರು: ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮೈಸೂರಿಗೆ ತೆರಳಲು ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಮಣಿಪಾಲ ಆಸ್ಪತ್ರೆಗೆ ಬೆಳಗ್ಗೆ ಭೇಟಿ ನೀಡಿದ ಶಿವಕುಮಾರ್ ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಎಂ. ಕೃಷ್ಣ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚೆ ನಡೆಸಿದರು. ‘ಎಸ್.ಎಂ ಕೃಷ್ಣ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಹೆಚ್ಚಿನ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಅವರ ವಿಶ್ರಾಂತಿಗೆ ಧಕ್ಕೆಯಾಗದಂತೆ ಸದ್ಯ ಯಾರೂ ಅವರ ಭೇಟಿಗೆ ಬರಬಾರದು ಎಂದು ಶಿವಕುಮಾರ್ ಅವರು ಕೃಷ್ಣ ಅವರ ಪರವಾಗಿ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಮುಖ್ಯ ಮಂತ್ರಿ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.
PublicNext
26/09/2022 06:11 pm