ಬಳ್ಳಾರಿ: ಜಿಲ್ಲೆಯ ಮೂರು ನಾಲ್ಕು ಶಾಸಕರು ಬಿಜೆಪಿ ಬರಲಿದ್ದಾರೆ ಎಂದು ಬಿಜೆಪಿ ಶಾಸಕ ಜಿ ಸೋಮಶೇಖರ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಜಿಲ್ಲೆಯ ಮೂರ್ನಾಲ್ಕು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವುದಕ್ಕೆ ಚರ್ಚೆ ನಡೆಸುತ್ತಿದ್ದಾರೆ. ಚುನಾವಣೆಗೂ ಮುನ್ನ ಬಹಳ ಜನರು ಬರುತ್ತಾರೆ. ಸಿನಿಮಾ ಈಗ ಸ್ಟಾರ್ಟ್ ಆಗಿದೆ. ಮುಂದೆ ನೋಡಿ ನಿಮಗೆ ಗೊತ್ತಾಗುತ್ತದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
ಬಿಜೆಪಿಯಲ್ಲಿದ್ದವರು ಕಾಂಗ್ರೆಸ್ಗೆ ಹೋಗಿದ್ದಾರೆ. ಅವರು ನಮ್ಮನ್ನು ಕಾಂಗ್ರೆಸ್ಗೆ ಆಹ್ವಾನಿಸುವುದೇನು? ಅವರೇ ಬಿಜೆಪಿಗೆ ಸೇರಲಿದ್ದಾರೆ. ಈಗಾಗಲೇ ಜಿಲ್ಲೆಯ ಮೂರ್ನಾಲ್ಕು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವುದಕ್ಕೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ.
PublicNext
27/09/2022 04:40 pm