ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಸಭೆಯ ವಿ.ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಅಕ್ಟೋಬರ್ 17ರಂದು ನಡೆಯಲಿರುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ 'ಚಿಂತನ ಶಿಬಿರ'ದಲ್ಲಿ 'ಒಬ್ಬ ವ್ಯಕ್ತಿಗೆ ಒಂದು ಹುದ್ದೆ' (ಏಕ ವ್ಯಕ್ತಿ ಏಕ ಹುದ್ದೆ) ಎಂಬ ನಿಯಮ ಅಳವಡಿಕೆ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಬದ್ಧರಾಗಿ ತಾವು ಮೇಲ್ಮನೆಯಲ್ಲಿನ ಹೆಚ್ಚುವರಿ ಹೊಣೆಗಾರಿಕೆಯನ್ನು ತ್ಯಜಿಸುತ್ತಿರುವುದಾಗಿ ಮಲ್ಲಿಕಾರ್ಜುನ ಅವರು ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಿಳಿಸಿದ್ದರು. ಶುಕ್ರವಾರ ರಾತ್ರಿ ಅವರು ಸೋನಿಯಾ ಗಾಂಧಿಗೆ ಪತ್ರ ರವಾನಿಸಿದ್ದಾರೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸುಮಾರು 30 ಕಾಂಗ್ರೆಸ್ ನಾಯಕರ ಬೆಂಬಲವನ್ನು ಪಡೆದಿರುವ ಖರ್ಗೆ, ಮುಂದಿನ ಅಧ್ಯಕ್ಷರಾಗುವುದು ಬಹತೇಕ ಖಚಿತವಾಗಿದೆ. ದೀಪೇಂದರ್ ಹೂಡಾ, ಸಲ್ಮಾನ್ ಖುರ್ಷಿದ್, ಅಶೋಕ್ ಗೆಹ್ಲೋಟ್, ದಿಗ್ವಿಜಯ ಸಿಂಗ್, ಮನೀಶ್ ತಿವಾರಿ, ಪೃಥ್ವಿರಾಜ್ ಚವಾಣ್ ಮತ್ತು ಇತರರು ಖರ್ಗೆ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮೂವರು ಸ್ಪರ್ಧೆ ನಡೆಸುತ್ತಿದ್ದಾರೆ. ಖರ್ಗೆ ಜೊತೆಗೆ ಕೇರಳದ ನಾಯಕ ಶಶಿ ತರೂರ್ ಮತ್ತು ಜಾರ್ಖಂಡ್‌ನ ಕೆಎನ್ ತ್ರಿಪಾಠಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

Edited By : Vijay Kumar
PublicNext

PublicNext

01/10/2022 04:54 pm

Cinque Terre

30.71 K

Cinque Terre

4

ಸಂಬಂಧಿತ ಸುದ್ದಿ