ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ರಾಜ್ಯಕ್ಕೆ ಬರಲಿದ್ದಾರೆ ಸೋನಿಯಾ ಗಾಂಧಿ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ

ಮೈಸೂರು: ನಾಳೆ ಅಕ್ಟೋಬರ್ 4ರಂದು ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬರಲಿದ್ದಾರೆ. ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ ಬರಲಿದ್ದಾರೆ. ವಿಮಾನ ನಿಲ್ದಾಣದಿಂದ ಮೈಸೂರಿಗೆ ಆಗಮಿಸಲಿರುವ ಸೋನಿಯಾಗಾಂಧಿ ಅವರು ಸೋಮವಾರದ ಯಾತ್ರೆ ಮುಗಿಸಿ ಹೆಲಿಕ್ಯಾಪ್ಟರ್‌ನಲ್ಲಿ ಮಡಿಕೇರಿಗೆ ಪ್ರಯಾಣಿಸಲಿದ್ದಾರೆ.

ಅ. 4, 5ರಂದು ಕೊಡಗು ಭಾಗದ ರೆಸಾರ್ಟ್​ವೊಂದರಲ್ಲಿ ವಾಸ್ತವ್ಯ ಮಾಡಲಿದ್ದು, ಈ ವೇಳೆಯಲ್ಲಿ ಮುಂಬರುವ ಕರ್ನಾಟಕ ಚುನಾವಣೆ ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Edited By : Nagaraj Tulugeri
PublicNext

PublicNext

03/10/2022 07:30 am

Cinque Terre

76.34 K

Cinque Terre

1