ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್ಥಿಕತೆ ಬಗ್ಗೆ RSSನ ಹೊಸಬಾಳೆ ಕಳವಳ; 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? ಎಚ್‌ಡಿಕೆ ಪ್ರಶ್ನೆ

ಬೆಂಗಳೂರು: ಭಾರತದ ಸುಮಾರು 20 ಕೋಟಿ ಜನರು ಬಡತನದಲ್ಲಿದ್ದಾರೆ. ಇದಕ್ಕೆ ಹಲವು ದಶಕಗಳಿಂದ ಅಸ್ತಿತ್ವದಲ್ಲಿದ್ದ ಆರ್ಥಿಕ ನೀತಿಗಳೇ ಕಾರಣ. ಕಳೆದ ಕೆಲ ವರ್ಷಗಳಲ್ಲಿ ಪರಿಸ್ಥಿತಿ ಬದಲಿಸಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಪ್ರತಿವರ್ಷ ವಿಜಯದಶಮಿಯಂದು ಆರ್​ಎಸ್​ಎಸ್​ನ ಸರಸಂಘಚಾಲಕರು ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಅದಕ್ಕೆ ಕೇವಲ ಮೂರು ದಿನ ಮೊದಲ ಸರಕಾರ್ಯವಾಹ ಹುದ್ದೆಯಲ್ಲಿರುವ ದತ್ತಾತ್ರೇಯ ಹೊಸಬಾಳೆ ಅವರು ಬಡತನದ ಕುರಿತು ಪ್ರಸ್ತಾಪಿಸಿರುವುದು ಮಹತ್ವ ಪಡೆದಿದೆ.

ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸರಣಿ ಟ್ವೀಟ್ ಮಾಡಿದ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ. ಆರ್​ಎಸ್​ಎಸ್​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ನೀಡಿರುವ ಈ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ. ಕಳೆದ 7 ವರ್ಷದ ಬಿಜೆಪಿ ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ? ಯಾರು ಹಾಳಾಗಿದ್ದಾರೆ? ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ. 20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? 23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ. ಆದರೆ, ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ, ವಾರಕ್ಕೆ 6,000 ಕೋಟಿ ರೂ. ಸಂಪಾದನೆ ಮಾಡುತ್ತಿದ್ದಾರೆ!! ಇದು ಸದ್ಯದ ಭಾರತದ ಚಿತ್ರಣ. ದೇಶದ ಶೇ.20ರಷ್ಟು ಆದಾಯ ಶೇ.1ರಷ್ಟು ಜನರ ಕೈಯ್ಯಲ್ಲಿದೆ ಎಂದರೆ ಇದಕ್ಕಿಂತ ಆಘಾತಕಾರಿ ಸಂಗತಿ ಮತ್ತೊಂದು ಇದೆಯಾ? ಇದು ಹೊಸಬಾಳೆ ಅವರ ಪ್ರಶ್ನೆ ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ? ಸಮೀಕ್ಷೆಗಳು ಹೇಳಿದ ಸತ್ಯವನ್ನೇ ಹೊಸಬಾಳೆ ಅವರು ಹೇಳಿದ್ದಾರೆ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Edited By : Vijay Kumar
PublicNext

PublicNext

04/10/2022 09:34 am

Cinque Terre

80.49 K

Cinque Terre

14

ಸಂಬಂಧಿತ ಸುದ್ದಿ