ಬೆಂಗಳೂರು : ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕಾಗಿ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಹೌದು ! ಅರಮನೆ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪಕ್ಷದ ಕಾರ್ಯಕಾರಿಣಿ ಸಭೆಗೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನೂತನಕುಮಾರಿ, ಕೆಲ ಸಮಯ ಚರ್ಚಿಸಿದರು.
2022ರ ಜುಲೈ 26ರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಇವರ ಹತ್ಯೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಪ್ರವೀಣ್ ಕುಟುಂಬದ ಬೆನ್ನಿಗೆ ನಾವಿದ್ದೇವೆ ಎಂದು ಸಿಎಂ ಆ ವೇಳೆ ಆರ್ಥಿಕ ಸಹಾಯದ ಅಭಯ ನೀಡಿದ್ದರು.
ಅದರಂತೆ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡುವುದಾಗಿ ದೊಡ್ಡ ಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆ ಮಾಡಿದ್ದರು. ಸೆ.29ರಂದು ಪ್ರವೀಣ್ ಪತ್ನಿಗೆ ಉದ್ಯೋಗ ನೀಡಿ ಬೊಮ್ಮಾಯಿ ಆದೇಶ ಹೊರಡಿಸಿದ್ದರು. ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಕಷ್ಟಕ್ಕೆ ಸ್ಪಂದಿಸಿದ ಸಿಎಂಗೆ ನೂತನಕುಮಾರಿ ಕೃತಜ್ಞತೆ ಸಲ್ಲಿಸಿದರು.
PublicNext
08/10/2022 12:20 pm