ಬೆಳಗಾವಿ : ಯಡಿಯೂರಪ್ಪ ಅವರನ್ನು ಕರೆದುಕೊಂಡು ಓಡಾಡಿದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಲಗಾಟಿ ಹೊಡೆಯುತ್ತೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ.
ಹೌದು ! ಬೆಳಗಾವಿ ಜಿಲ್ಲೆ ಮೂಡಲಗಿಯ ಕಲ್ಲೋಳಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗೆ ಹೋದರೆ ರಾಜ್ಯದಲ್ಲಿ ಬಿಜೆಪಿಯನ್ನು ಲಗಾಟಿ ಹೊಡೆಸುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಹೇಳದೇ ಚುನಾವಣೆ ಪೂರ್ವ ಇದು ಎಚ್ಚರಿಕೆಯೋ ಎಂಬಂತೆ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪನವರನ್ನು ಕರೆದುಕೊಂಡು ಹೋದರೆ ನೀವು ಕೂಡ ಲಾಗ ಹಾಕ್ತೀರಿ ಎಂದು ಹೇಳಿದ ಯತ್ನಾಳ್, ಯಡಿಯೂರಪ್ಪ ಪಂಚಮಸಾಲಿ ಸಮುದಾಯದ ವಿರೋಧಿಯಾಗಿಲ್ಲದಿದ್ದರೆ ಮೀಸಲಾತಿ ಜಾರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ
PublicNext
08/10/2022 01:36 pm