ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲಾಯಂ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಹಲವಾರು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದು, ಮುಲಾಯಂ ಸಿಂಗ್ ಯಾದವ್ ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಜಿ ಉತ್ತರಪ್ರದೇಶ ಹಾಗೂ ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ ಅವರು ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಒಳನೋಟವುಳ್ಳವು ಹಾಗೂ ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿದ್ದವು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Edited By : Vijay Kumar
PublicNext

PublicNext

10/10/2022 11:15 am

Cinque Terre

133.22 K

Cinque Terre

5

ಸಂಬಂಧಿತ ಸುದ್ದಿ