ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ಈ ಯಾತ್ರೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ನೀವು ಈ ಪಾದಯಾತ್ರೆಯಲ್ಲಿ ಭಾಗವಹಿಸಿದರೆ ದೇಶಕ್ಕೆ ಉತ್ತಮ ಸಂದೇಶ ರವಾನೆಯಾಗಲಿದೆ. ಮುಂಬರುವ 2024ರ ಲೋಕಸಭಾ ಚುವಾವಣೆಯಲ್ಲಿ ಬಿಜೆಪಿಯನ್ನ ಬಗ್ಗುಬಡೆಯಬಹುದು. ಪ್ರಧಾನಿ ಮೋದಿ ಅವರ ಸರ್ವಾಧಿಕಾರಿ ಧೋರಣೆಯಿಂದ ಜನರು ಕಂಗೆಟ್ಟಿದ್ದಾರೆ. ಉತ್ತಮ ಸರ್ಕಾರ ನೀಡಲು ನಾವು ಒಂದಾಗಬೇಕಿದೆ ಎಂದು ದಿಗ್ವಿಜಯ್ ಸಿಂಗ್, ಲಾಲು ಅವರಿಗೆ ಕೋರಿಕೊಂಡಿದ್ದಾರೆ.
PublicNext
12/10/2022 08:17 am