ಕಳೆದ ಮೂರ್ನಾಲ್ಕು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ರಾತ್ರಿಯಿಡೀ ಸುರಿಯುತ್ತಿದ್ದ ಮಳೆ ಬೆಳಿಗ್ಗೆವರೆಗೂ ಬಿಟ್ಟಿಲ್ಲ. ಆಗಾಗ್ಗೆ ಮಳೆರಾಯ ಬಿಡುವು ನೀಡಿದರೂ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿದ್ದರೆ, ಸೇತುವೆ ಮೇಲೆ ನೀರು ಬಂದಿದೆ.
ಚನ್ನಗಿರಿ ತಾಲೂಕಿನ ಸೋಮಶೆಟ್ಟಿಹಳ್ಳಿ, ಸಿದ್ದಾಪುರ, ಮಲ್ಲಹಾಳ್ ಗ್ರಾಮದಲ್ಲಿ ಭಾರೀ ಮಳೆ ಸುರಿದ ಪರಿಣಾಮ ಗದ್ದೆಗಳಿಗೆ ನೀರು ನುಗ್ಗಿದೆ. ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಓಡಾಟಕ್ಕೆ ತೊಂದರೆಯಾಗಿದೆ.
ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ಮಾಯಕೊಂಡ ಸೇರಿದಂತೆ ಹಲವೆಡೆ ನಿರಂತರ ಬಿರುಮಳೆಯಾಗುತ್ತಿದೆ. ಮೆಕ್ಕೆಜೋಳ ಬೆಳೆಯೂ ನೀರಿನಲ್ಲಿ ಹಾಳಾಗಿದೆ. ರೈತರು ಸಂಕಷ್ಟದಲ್ಲಿದ್ದು, ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
PublicNext
30/08/2022 02:40 pm