ಹಾವೇರಿ ಜಿಲ್ಲೆಯ ವರದಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಕಾರ್‌ಗೆ ಏಕಾಏಕಿ ಬೆಂಕಿ ಹತ್ತಿ ಧಗಧಗನೆ ಉರಿದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದ ಕಾರ್, ಏಕಾಏಕಿ ಕಾರ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಇಳಿದ ಡ್ರೈವರ್ ಹಾಗೂ ಸವಾರರು ಕಾರು ಬಿಟ್ಟು ದೂರ ಓಡಿ ಬಂದಿದ್ದಾರೆ, ನಂತರ ಒಮ್ಮೆಲೆ ಏಕಾಏಕಿ ಬೆಂಕಿ ಹೆಚ್ಚಾಗಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಕಾರ್ ಇಂಜಿನ್ ಸಂಪೂರ್ಣ ಹೀಟಾಗಿ ಬೆಂಕಿ ಹತ್ತಿದೆ ಎನ್ನಲಾಗಿದೆ. ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
PublicNext
14/07/2022 07:40 pm