ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
PublicNext
22/01/2025 10:51 am