ರಾಯಚೂರು : ರಾಜ್ಯದಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ಅಲರ್ಟ್ ಆಗಿದ್ದಾರೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಬ್ಯಾಂಕ್ ಮ್ಯಾನೇಜರ್‌ಗಳ ಸಭೆ ನಡೆದಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ಕೊಡಲಾಗಿದೆ.
ಕೆಲ ಬ್ಯಾಂಕ್‌ಗಳು ಸೂಕ್ತ ಭದ್ರತೆ ವ್ಯವಸ್ಥೆ ಹೊಂದಿರದ ಹಿನ್ನೆಲೆ ಖಡಕ್ ಎಚ್ಚರಿಕೆ ಕೊಟ್ಟಿದ್ದು ಹಗಲು ದರೋಡೆಗಳು ನಡೆಯುತ್ತಿರುವುದರಿಂದ ಸೂಕ್ತ ಭದ್ರತೆ ಒದಗಿಸಲು ಸೂಚನೆ ಕೊಡಲಾಗಿದೆ. ಬ್ಯಾಂಕ್ ಹಾಗೂ ಎಟಿಎಂಗಳಲ್ಲಿ ಸಿಸಿಕ್ಯಾಮೆರಾ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು. ಹಣ ಚಿನ್ನ ಡ್ರಾ ಮಾಡಿಕೊಂಡು ಹೋಗುವ ಗ್ರಾಹಕರಲ್ಲಿ ಜಾಗೃತಿ ಮೂಡಿಸಬೇಕು.
ಕೆಲ ರೈತರು ಬೆಳೆಯ ಹಣವನ್ನ ನಗದು ರೂಪದಲ್ಲಿ ಪಡೆಯುವುದರಿಂದ ಭದ್ರತೆಯ ಸೂಚನೆ ನೀಡಬೇಕು
ಎಟಿಎಂ ಗಳಲ್ಲಿ ಸಿಸಿಟಿವಿ, ಅಲರಾಂ, 24*7 ಸೆಕ್ಯೂರಿಟಿ ಗಾರ್ಡ್ ನಿಯೋಜನೆ ಬಗ್ಗೆ ಸಭೆಯಲ್ಲಿ ಸೂಚನೆ ಕೊಡಲಾಯಿತು.
PublicNext
19/01/2025 12:26 pm