ರಾಯಚೂರು : ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಬಸವರಾಜ ಎಂಬಾತನನ್ನು ಬಸವರಾಜ ಹೊನ್ನಪ್ಪ (37) ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಐದು ವರ್ಷಗಳಿಂದ ಮಲ್ಲಟ ಗ್ರಾಮದಲ್ಲಿ ನೆಲೆಸಿದ್ದ ಬಸವರಾಜ್‌ನ ಕುತ್ತಿಗೆ ಮತ್ತು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ.
ಪತ್ನಿಯ ಅನೈತಿಕ ಸಂಬಂದಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಶಂಕೆ ಬಲವಾಗಿದ್ದು, ಸಿರವಾರ ಪೊಲೀಸ್ ಠಾಣೆಯ ಪಿಎಸ್‌ಐ ಗೀತಾಂಜಲಿ ಶಿಂಧೆ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
PublicNext
06/10/2022 03:29 pm