ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ಅ.1 ರಿಂದ 31 ವರೆಗೆ ಕ್ಲೀನ್ ಇಂಡಿಯಾ ಸ್ವಚ್ಛ ಭಾರತ್ ಕಾರ್ಯಕ್ರಮ

ರಾಯಚೂರು : ಕೇಂದ್ರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವತಿಯಿಂದ ಅ.1 ರಿಂದ 31 ರವರೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಕ್ಲೀನ್ ಇಂಡಿಯಾ 2.0 ಸ್ವಚ್ಛತಾ ಭಾರತ ಕಾರ್ಯಕ್ರಮವನ್ನು ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ನೆಹರು ಯುವ ಕೇಂದ್ರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೆಹರು ಯುವ ಕೇಂದ್ರದ ರಾಜ್ಯ ಸಂಯೋಜಕರಾದ ಎಂ.ಎನ್. ನಟರಾಜ್ ಹೇಳಿದರು.

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದ್ದು, ಈ ಅಭಿಯಾನದಿಂದ 1 ಕೋಟಿ ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ. ದೇವಾಲಯಗಳು, ಐತಿಹಾಸಿಕ ಸ್ಥಳಗಳು, ಹೊಟೇಲ್‌ಗಳು, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆ ಹಾಗೂ ನೀರಿನ ಮೂಲಗಳಲ್ಲಿ ಸಂಗ್ರಹವಾಗಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಸಲಾಗುವುದೆಂದು ಹೇಳಿದರು.

ಧಾರ್ಮಿಕ ಮುಖಂಡರು, ಶೈಕ್ಷಣಿಕ ಸಂಸ್ಥೆಯವರು, ಪೊಲೀಸ್ ಇಲಾಖೆಯವರು ಸೇರಿದಂತೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ ಅವರು ದೇಶದ 744 ಜಿಲ್ಲೆಗಳಲ್ಲಿ ಈ ಅಭಿಯಾನಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

Edited By : Shivu K
PublicNext

PublicNext

01/10/2022 04:34 pm

Cinque Terre

28.81 K

Cinque Terre

1