ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ನಾರಾಯಣಗುರು ವಸತಿ ಶಾಲೆ ಮಂಜೂರು ಮಾಡಲು ಒತ್ತಾಯ

ರಾಯಚೂರು: ಶ್ರೀನಾರಾಯಣ ಗುರು ವಸತಿ ಶಾಲೆಗಳನ್ನು ಕಲ್ಯಾಣ ‌ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಸಮಾನತೆಯ ಹರಿಕಾರ ಶ್ರೀ ನಾರಾಯಣ ಗುರುಗಳ ಸ್ಮರಣಾರ್ಥವಾಗಿ 'ನಾರಾಯಣ ಗುರು ವಸತಿ ಶಾಲೆ'ಗಳನ್ನು ಪ್ರಾರಂಭಿಸುವದಾಗಿ ರಾಜ್ಯ ಸರ್ಕಾರ 2022-23ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದೆ. ಹಿಂದುಳಿದ ವರ್ಗಗಳ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಂತೆ ಇದೂ ಕೂಡ ಅನುಕೂಲವಾಗಲಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಹಿಂದುಳಿದ ವರ್ಗಗಳ ಮಕ್ಕಳು‌ ವಾಸವಾಗಿದ್ದಾರೆ. ಈ‌ ಭಾಗದ ಅನೇಕರು ಬದುಕಿಗಾಗಿ ಮಹಾನಗರಗಳಿಗೆ ಗುಳೆ ಹೋಗುತ್ತಾರೆ. ಹೀಗಾಗಿ ಈ ಭಾಗದ ಅನೇಕ ಮಕ್ಕಳು ಶಾಲೆಯನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಾರೆ. ಈ ಭಾಗದ ಎಲ್ಲಾ ಜಿಲ್ಲೆಗಳಿಗೂ ಶ್ರೀ ನಾರಾಯಣ ಗುರು ವಸತಿ ಶಾಲೆಗಳನ್ನು ಮಂಜೂರು ಮಾಡಿದಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಮನವಿ ಮಾಡಿದರು.

Edited By : Vijay Kumar
PublicNext

PublicNext

01/10/2022 10:40 pm

Cinque Terre

22.66 K

Cinque Terre

0