ರಾಯಚೂರು : ಶಿಕ್ಷಣ ಸಂಸ್ಥೆಗಳಲ್ಲಿ ಅತಿ ಹೆಚ್ಚು ಪೈಪೋಟಿ ಇರುವುದರಿಂದ ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟ ಶಿಕ್ಷಣ ನೀಡಬೇಕಿದೆ. ಶೈಕ್ಷಣಿಕ ಬೆಳೆವಣಿಗೆ ಜೊತೆಗೆ ಉತ್ತಮ ಸಾಮಾಜಿಕ ಸೇವೆ ಸಲ್ಲಿಸುತ್ತೇವೆ ಎಂದು ಶಾಸಕ ಶಿವರಾಜ್ ಪಾಟೀಲ್ ಅವರು ಹೇಳಿದರು.
ನಗರದ ರಂಗಮಂದಿರದಲ್ಲಿ ಕುಸ್ಮಾ ಸಂಸ್ಥೆ ಆಯೋಜಿಸಿದ ವಿವಿಧ ಕ್ಷೇತ್ರಗಳ ಸಾಧಕರಿಗೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ 3 ಕೋಟಿ ಅನುದಾನ ನೀಡಿದ್ದೇನೆ ಎಂದ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಅತಿ ಹೆಚ್ಚು ಪೈಪೋಟಿ ಇರುವುದರಿಂದ ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟ ಶಿಕ್ಷಣ ನೀಡುವುದರ ಜೊತೆಗೆ ಅಭಿವೃದ್ಧಿಯಲ್ಲಿ ಮುಂದುವರೆಯುತ್ತಿವೆ. ಪ್ರಸ್ತುತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಜೊತೆಯಲ್ಲಿ ಬೌದ್ಧಿಕ ವಿಕಾಸವೂ ಅಗತ್ಯವಿದೆ.
ಇದರಿಂದ ಸಮಾಜದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ ಎಂದರು. ಶೈಕ್ಷಣಿಕ ಸಂಸ್ಥೆ ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಇವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ.
ನಮಗೆ ವಿದ್ಯೆ ಕಳಿಸಿದ ಗುರುಗಳನ್ನು ಎಂದು ಮರೆಯಲು ಸಾಧ್ಯವಿಲ್ಲ. ನಾವು ಸಮಾಜದಲ್ಲಿ ಉತ್ತಮ ನಾಯಕರಾಗಿ ಬೆಳೆಯಲು ತಂದೆ-ತಾಯಿಗಳ ನಂತರ ವಿದ್ಯೆ ಕಳಿಸಿದ ಗುರುಗಳೇ ನಮಗೆ ಮಾರ್ಗದರ್ಶಕರು. ಒತ್ತಡ ಮಧ್ಯದಲ್ಲಿ ಶಿಕ್ಷಕರು ತಮ್ಮ ವೃತ್ತಿಗೆ ಸೇವೆ ಸಲ್ಲಿಸುತ್ತಾರೆ.ಶಿಕ್ಷಕರಿಗೆ ಆರ್ಥಿಕ ಕೊರತೆಯಾಗದಂತೆ ಅವರಿಗೆ ಉತ್ತಮ ಸಂಬಳ ನೀಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಲಹೆ ನೀಡಿದರು.
Kshetra Samachara
24/09/2022 06:36 pm