ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಅರಿಕೆರೆ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅ.15ರಂದು ಜಿಲ್ಲೆಗೆ ಆಗಮಿಸಿ ಗ್ರಾಮ ವಾಸ್ತವ್ಯ ಹೊಡಲಿದ್ದಾರೆ. ಹಿನ್ನೆಲೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ಅಪಾರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ. ಅವರು ಸಂಬಂಧಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಗ್ರಾಮ ವಾಸ್ತವ್ಯ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅವರು ತಾಲೂಕಿನ ಅರೇಕೆರಾ ಗ್ರಾಮದಲ್ಲಿ ಆ.15 ರಂದು ಕಂದಾಯ ಸಚಿವ ಆರ್. ಅಶೋಕ ಅವರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಬರುವ ನಿರೀಕ್ಷೆ ಇದ್ದು ಅಧಿಕಾರಿಗಳು ಅಗತ್ಯ ಕ್ರಮ ವಹಿಸಲು ಸಲಹೆ ನೀಡಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಸಂಬಂಧಪಟ್ಟ ಎಲ್ಲ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಜನರನ್ನು ಆಕರ್ಷಸಿಸುವ ಮಳಿಗೆಗಳು ನಿರ್ಮಿಸುವಂತೆ ಸೂಚನೆ ನೀಡಿದರು.
ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ 300 ಜನ ಫಲಾನುಭವಿಗಳನ್ನು ಕರೆ ತರುವಂತೆ ಸಲಹೆ ನೀಡಿದರು. ತುರ್ತು ಸೇವೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು. ವಯೋವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮೂಲ ಸಾಮಗ್ರಿಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದರು.
Kshetra Samachara
21/09/2022 06:22 pm