ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು : ಅಪಘಾತ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಡಿಸಿ ಖಡಕ್ ಸೂಚನೆ

ರಾಯಚೂರು : ಜಿಲ್ಲೆಯಲ್ಲಿರುವ ಅತಿ ಹೆಚ್ಚು ಅಪಘಾತ ಸಂಭವಿಸುವ ವಲಯಗಳನ್ನು ಗುರುತಿಸಿ, ಅಪಘಾತ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಆರ್‌ಟಿಒ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳಿಗೆ ಆರ್‌ಟಿಒ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳು ತಮ್ಮ ಮೀಸಲು ಅನುದಾನದಲ್ಲಿ ಜಿಲ್ಲೆಯಲ್ಲಿ ರಸ್ತೆ ಸುರಕ್ಷಿತ ಅಭಿವೃದ್ಧಿಗೆ ಕ್ರಮ ವಹಿಸಲು ಸೂಚನೆ ನೀಡಿದರು. ಅಪಘಾತ ನಿಯಂತ್ರಣಕ್ಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬೇಕು. ಅಂತಹ ರಸ್ತೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಇಂಟರ್‌ಸೆಪ್ಟರ್ ವಾಹನಗಳ ಸಂಖ್ಯೆ ಹೆಚ್ಚಳ, ಬ್ಯಾರಿಕೇಡ್ ಅಳವಡಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಅಪಘಾತಗಳನ್ನು ತಡೆಯಲು ಹೆಚ್ಚು ಅಪಘಾತವಾಗುವ ರಸ್ತೆಯ ಪಕ್ಕದಲ್ಲಿ ಪ್ರತಿಫಲನ ವೇಗ ನಿಯಂತ್ರಣ ಫಲಕವನ್ನು ದೊಡ್ಡದಾಗಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಾದ್ಯಂತ ಸಂಚಾರ ನಿಯಮ ಪಾಲನೆ ಬಗ್ಗೆ ಮೊದಲು ಅರಿವು ಮೂಡಿಸಬೇಕು. ಅಪಘಾತ ತಡೆಗಟ್ಟಲು ವಾಹನ ಸಂಚಾರಿಗೆ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಬೇಕೆಂದರು.

Edited By : Nirmala Aralikatti
Kshetra Samachara

Kshetra Samachara

23/09/2022 04:08 pm

Cinque Terre

660

Cinque Terre

0