ರಾಯಚೂರು: ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಿ 2022ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಅಥವಾ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಈಗಾಗಲೇ ಸರ್ಕಾರದ ನಿರ್ದೇಶನದಂತೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯೊಂದಿಗೆ ಹೆಚ್ಚುವರಿ ಪರಿಹಾರ ಧನವನ್ನು ಸೇರಿಸಿ, ಮೂರು ಹಂತಗಳಲ್ಲಿ 1,419 ಫಲಾನುಭವಿಗಳಿಗೆ 1.48 ಕೋಟಿ ರೂ. ಇನ್ ಪುಟ್ ಸಬ್ಸಿಡಿಯನ್ನು ನೇರವಾಗಿ ಆಧಾರ್ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನ ಪ್ರವಾಹ ಅಥವಾ ಭಾರಿ ಮಳೆ ಸಂದರ್ಭದಲ್ಲಿ ಬೆಳೆ ಹಾನಿಯಾಗಿರುವ ರೈತರ ಮಾಹಿತಿಯನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ನಾಲ್ಕನೇ ಹಂತದ 620 ರೈತರಿಗೆ ಸರ್ಕಾರದ ನಿರ್ದೇಶನದಂತೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯೊಂದಿಗೆ ಹೆಚ್ಚುವರಿ ಪರಿಹಾರ ಧನವನ್ನು ಸೇರಿಸಿ ಒಟ್ಟು 66.78 ಲಕ್ಷಗಳ ರೂ. ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲು ಅನುಮೊದನೆ ನೀಡಲಾಗಿದ್ದು, ಅತೀ ಶೀಘ್ರದಲ್ಲಿ ಮಾನ್ಯ ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗುವುದು ಹಾಗೂ ಬಾಕಿ ಉಳಿದ ರೈತರಿಗೆ ಹಂತ ಹಂತವಾಗಿ ಪರಿಹಾರ ನೀಡುವುದು ಪ್ರಗತಿ ಹಂತದಲ್ಲಿದ್ದು ತುರ್ತಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
PublicNext
12/10/2022 10:55 pm