ರಾಯಚೂರು : ಕಳೆದ ಎರಡು ದಿನಗಳಿಂದ ರಾಯಚೂರು ನಗರದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮಳೆಯ ಹೊಡೆತಕ್ಕೆ ರಾಯಚೂರು ನಗರದಲ್ಲಿನ ರಸ್ತೆಗಳು ಕೊಚ್ಚಿ ಹೋಗಿದ್ದು ರಸ್ತೆಯಲ್ಲಿ ಗುಂಡಿಗಳದ್ದೆ ಕಾರುಬಾರಾಗಿ. ರಸ್ತೆ ಇತ್ತು ಇಲ್ಲವೋ ಎಂಬಂತೆ ಕಾಣುತ್ತಿದೆ.
ಹೌದು, ರಾಯಚೂರು ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಿದೆ. ಇನ್ನೂ ಮಳೆಯ ಹೊಡೆತಕ್ಕೆ ನಗರದ ಬಹುತೇಕ ರಸ್ತೆಗಳು ಹಾಳಾಗಿ ಹೋಗಿದ್ದು ಗುಂಡಿಗಳಿಂದ ತುಂಬಿದೆ. ಪ್ರಯಾಣಿಕರು ಈ ಒಂದು ರಸ್ತೆಯಲ್ಲಿ ಓಡಾಡಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವರಂತೂ ರಸ್ತೆಯಲ್ಲಿ ಗುಂಡಿಗಳಿವೆಯೋ ಗುಂಡಿಯಲ್ಲಿ ರಸ್ತೆ ಇದೆಯೋ ಎಂಬ ಅನುಮಾನದಲ್ಲೇ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ರಾಯಚೂರು ನಗರದಲ್ಲಿನ ರಸ್ತೆಗಳನ್ನು ನಿರ್ವಹಣೆ ಮಾಡುವಲ್ಲಿ ನಗರಸಭೆ, ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿವೆ. ಇನ್ನಾದ್ರು ಸಂಬಂಧ ಪಟ್ಟ ಅಧಿಕಾರಿಗಳು ಈ ರಸ್ತೆಗಳ ನಿರ್ವಹಣೆ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.
Kshetra Samachara
29/09/2022 04:05 pm