ರಾಯಚೂರು: ಪ್ರವಾಸೋದ್ಯಮವು ದೇಶದ ಪ್ರಗತಿಗೆ ಮತ್ತು ಆರ್ಥಿಕತೆಗೆ ಬಹಳ ದೊಡ್ಡ ಕೊಡುಗೆ ನೀಡುವುದರೊಂದಿಗೆ, ಪ್ರವಾಸಿಗರ ಮತ್ತು ಸ್ಥಳೀಯರ ನಡುವೆ ಸ್ಥಳೀಯ ಕಲೆ ಮತ್ತು ಸಂಸ್ಕೃತಿ ಪೋಷಿಸುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್ ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣ ಪಕ್ಕದ ಐತಿಹಾಸಿಕ ಕೋಟೆಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ & ಪುರತತ್ವ ಇಲಾಖೆ, ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವಕರು ಮೊದಲು ಜಿಲ್ಲೆಯ ಇತಿಹಾಸವನ್ನು ತಿಳಿಯಬೇಕು. ಆನಂತರ ವಿಶ್ವದ ಇತಿಹಾಸವನ್ನು ಅರಿಯುವ ಕೆಲಸವಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಾಗಿ ಇತಿಹಾಸದಿಂದನೇ ಪ್ರಶ್ನೆಗಳು ಕೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇತಿಹಾಸದ ಅಧ್ಯಾಯವನ್ನು ಹೆಚ್ಚಾಗಿ ಮಾಡಿ ಐತಿಹಾಸಿಕ ಸ್ಥಳಗಳನ್ನು ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.
ಹೆಸರಿಗಷ್ಟೇ ಪ್ರವಾಸೋದ್ಯಮ ದಿನಾಚರಣೆ, ಆದ್ರೆ ಯಾವುದೇ ಐತಿಹಾಸಿಕ ಕುರುಹುಗಳನ್ನು ಉಳಿಸುವಂತಹ ಕೆಲಸಕ್ಕೆ ಮುಂದಾಗುತ್ತಿಲ್ಲ ಸ್ಥಳೀಯ ಆಡಳಿತ, ಪ್ರವಾಸೋದ್ಯಮ ಮತ್ತು ಪ್ರಾಚ್ಯವಸ್ತು ಇಲಾಖೆಗಳು ಎಂಬ ಕೊರಗು ಸಾರ್ವಜನಿಕರಲ್ಲಿ ಕಾಡುತ್ತಿದೆ.
Kshetra Samachara
29/09/2022 01:22 pm