ರಾಯಚೂರು: ಜನಸ್ಪಂದನ ಕಾರ್ಯಕ್ರಮದ ನಂತರ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶ್ರೀ ರಾಘವೇಂದ್ರ ಸ್ವಾಮಿಗಳವರ ದರ್ಶನವನ್ನು ಪಡೆದರು.
ಗಿಲ್ಲೆಸೂಗೂರು ಜನಸ್ಪಂದನ ಕಾರ್ಯಕ್ರಮದ ನಂತರ ಮಂತ್ರಾಲಯಕ್ಕೆ ತೆರಳಿ ಮಠಕ್ಕೆ ಭೇಟಿ ನೀಡಿ ರಾಯರ ಮೂಲಬೃಂದಾವನ ದರ್ಶನ ಪಡೆದರು. ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಶ್ರೀ ರಾಘವೇಂದ್ರ ಸ್ವಾಮಿ ಮಠ, ಮಂತ್ರಾಲಯ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸ್ನಾನ ಘಾಟ್ ಉದ್ಘಾಟನೆ ಮಾಡಿ, ವಿವಿಧ ಸುಧಾರಣೆಗಳನ್ನು ಒದಗಿಸುವ ಮೂಲಕ ನದಿ ಮುಂಭಾಗದ ಅಭಿವೃದ್ಧಿಗೆ ಅಡಿಪಾಯ ಹಾಕುವ ಕೆಲಸಕ್ಕೆ ಚಾಲನೆ ನೀಡಿದರು.
ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ್ ಕಾರಜೋಳ, ಸಾರಿಗೆ ಸಚಿವ ಶ್ರೀರಾಮುಲು ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
PublicNext
11/10/2022 09:50 pm