ರಾಯಚೂರು : ರಾಯಚೂರಿನಲ್ಲಿ 151 ದಿನಗಳಿಂದ ನಡೆಯುತ್ತಿರುವ ಏಮ್ಸ್ ಹೋರಾಟದ ಬಗ್ಗೆ ಮಾಹಿತಿ ಇದೆ. ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು, ರಾಯಚೂರು ಜಿಲ್ಲೆಗೆ ಏಮ್ಸ್ ತರುವ ಭರವಸೆ ನನಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದರು.
ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸಂಸ್ಥೆಯನ್ನ ಸ್ಥಾಪಿಸಬೇಕು ಎಂದು ಒತ್ತಾಯಿಸಿ, ಕಳೆದ 151 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಂಸದರು, ಸಚಿವರು ಮತ್ತು ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾನು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು, ಮುಂದಿನವಾರ ದೆಹಲಿಗೆ ತೆರಳುತ್ತಿದ್ದೇನೆ. ಆಗ ಎಮ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ. ರಾಯಚೂರು ಜಿಲ್ಲೆಯಲ್ಲಿ ಏಮ್ ಸ್ಥಾಪನೆ ಮಾಡುವ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು
PublicNext
11/10/2022 04:49 pm