ರಾಯಚೂರು ಕೆ. ಪಿ.ಸಿ.ಸಿ. ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾರತ್ ಜೋಡೋ ಯಾತ್ರೆ ಕುರಿತಂತೆ ರಾಯಚೂರಿನಲ್ಲಿ ಪಕ್ಷದ ನಾಯಕರ ಜತೆ ಸೋಮವಾರ ಸಭೆ ನಡೆಸಿದರು. ಶಾಸಕರಾದ ಹುಲಗೇರಿ ಬಸನಗೌಡ ತುರವಿಹಾಳ, ಬಸನಗೌಡ ದದ್ದಲ್, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಎನ್.ಎಸ್ ಬೋಸ್‌ರಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ್, ಡಿಸಿಸಿ ಅಧ್ಯಕ್ಷ ಬಿ.ವಿ ನಾಯಕ್, ಮಾಜಿ ಯುವಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಹಾಗೂ ಕಾಂಗ್ರೆಸ್ ಯುವ ಮುಖಂಡ ರವಿ ಬೋಸ್‌ರಾಜು ಮತ್ತಿತರರು ಭಾಗವಹಿಸಿದ್ದರು.
PublicNext
12/09/2022 10:15 pm