ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು : ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

ರಾಯಚೂರು : ಸ್ಲಂ ಬೋರ್ಡ್ ಸೇರಿ ಸರ್ಕಾರದ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ನೇರನಗದು ವರ್ಗಾವಣೆ ಮಾಡುವುದನ್ನು ತಡೆಯಬೇಕು ನಿರಂತರವಾಗಿ ನಡೆಯುತ್ತಿರುವ ವಿವಿಧ ಖರೀದಿಗಳನ್ನು ನಿಲ್ಲಿಸಬೇಕು, ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌, ಸಿಐಟಿಯು, ಸಿಡಬ್ಲ್ಯೂಎಫ್‌ ಐ ಸಂಘಟನೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಕೊಳಚೆ ನಿರ್ಮೂಲನೆ ಮಂಡಳಿ ಸೇರಿ ಇತರೆ ವಸತಿ ಯೋಜನೆಗಳ ಫಲಾನುಭವಿಗಳನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಗೆ ಫಲಾನುಭವಿ ಗಳನ್ನು ನೋಂದಾಯಿಸುವ ಕ್ರಮವನ್ನು ಕೈಬಿಡಬೇಕು, ಈಗಾಗಲೇ ಕೊಳಚೆ ನಿರ್ಮೂಲನೆ ಮಂಡಳಿಗೆ ಪಾವತಿಸಲಾದ 76 ಕೋಟಿ ರೂ ಹಣವನ್ನು ಕೂಡಲೇ ಮಂಡಳಿ ಖಾತೆಗೆ ವಾಪಾಸ್ ಪಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಮಂಡಳಿಯಲ್ಲಿರುವ ಖಾಲಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕು, ಕಲ್ಯಾಣ ಮಂಡಳಿಯ 19 ಸೌಲಭ್ಯಗಳನ್ನು ಎಲ್ಲರಿಗೂ ಸಿಗುವಂತೆ ಆಗಬೇಕು, ವಸ್ತುಗಳ ರೂಪದಲ್ಲಿ ಪರಿಹಾರ ಸಮುದ್ರ ನೀಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Edited By : Nagesh Gaonkar
PublicNext

PublicNext

22/09/2022 05:59 pm

Cinque Terre

16.51 K

Cinque Terre

0