ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: 'ಪಿಎಫ್‌ಐ, ಎಸ್‌ಡಿಪಿಐ ಹಾಗೂ ಬಜರಂಗದಳ ಸಂಘಟನೆಗಳನ್ನು ಬ್ಯಾನ್ ಮಾಡಿ'

ರಾಯಚೂರು: ದೇಶದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಹಾಗೂ ಬಜರಂಗದಳ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಯೋತ್ಪಾದನೆಗೆ ನಿರುದ್ಯೋಗ ಕಾರಣ ಅಂತ ನಾವೆಂದೂ ಹೇಳಿಲ್ಲ. ಕೆಲ ಮಾಧ್ಯಮದಲ್ಲಿ ಹೇಳಿಕೆಯನ್ನು ತಿರುಚಲಾಗಿದೆ. ನಾನು ಹೇಳಿದ್ದರ ಉದ್ದೇಶ ಬೇರೆಯಿತ್ತು. ಕೆಲಸ ಇಲ್ಲಿರೋದಕ್ಕೆ ಕಾರಣಕ್ಕೆ ಯುವಕರು ತಪ್ಪು ದಾರಿ ಹಿಡಿಯುತ್ತಿದ್ದಾರೆ ಎಂದು ಹೇಳಲಾಗಿದೆ ಎಂದರು.

ದೇಶದ್ರೋಹಿಗಳಿಗೆ ಗಲ್ಲು ಶಿಕ್ಷೆ ಕೊಡಿ, ಕ್ರಮ ಕೈಗೊಳ್ಳಿ. ಯುವಕರ ಕೆಲಸ ಇಲ್ಲದೇ ಇರುವುದರಿಂದ ಕೆಡುತ್ತಿದ್ದಾರೆ. ಕೆಲವರ ಮೈಂಡ್ ಸೆಟ್ ಹಾಗೇ ಇರುತ್ತದೆ ಎಂದಿದ್ದಾರೆ. ದೇಶದಲ್ಲಿ ಪಿಎಫ್‌ಐ, ಎಸ್‌ಡಿಪಿಐ, ಬಜರಂಗದಳ ಬ್ಯಾನ್ ಮಾಡಬೇಕು ಎಂದು ಡಬಲ್ ಇಂಜಿನ್ ಸರ್ಕಾರಕ್ಕೆ ಇದನ್ನೇ ಹೇಳುತ್ತಿದ್ದೇವೆ ಎಂದು ತಿಳಿಸಿದರು.

Edited By : Shivu K
PublicNext

PublicNext

25/09/2022 03:06 pm

Cinque Terre

38.28 K

Cinque Terre

58