ರಾಯಚೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಸಾಕಷ್ಟು ಸಾಕ್ಷಿಗಳು ಸಿಗುತ್ತೆ. ಇಲ್ಲಿ ಬಣ ರಾಜಕೀಯ ಕೂಡ ಸಾಕಷ್ಟು ಚಾಲ್ತಿಯಲ್ಲಿದೆ ಎಂಬುದಕ್ಕೂ ಹಲವು ಘಟನೆಗಳು ಸಾಕ್ಷಿಯಾಗಿವೆ. ಇತ್ತೀಚಿಗೆ ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಮುಖಂಡರು ಕಿತ್ತಾಡಿಕೊಂಡ ಘಟನೆಯ ವೀಡಿಯೋ ಇದೀಗ ಬಣ ರಾಜಕೀಯಕ್ಕೆ ಸಾಕ್ಷಿಯಾಗಿದೆ.
ರಾಹುಲ್ ಗಾಂಧಿಯವರ ಭಾರತ ಜೋಡು ಪಾದಯಾತ್ರೆ ಕರ್ನಾಟಕದಲ್ಲಿ ಆರಂಭವಾಗಿದೆ. ಇದೇ ಹಿನ್ನೆಲೆಯಲ್ಲಿ ಇತ್ತೀಚಿಗೆ ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ ಖಂಡ್ರೆ ಅವರ ನೇತೃತ್ವದಲ್ಲಿ ಪೂರ್ವಿಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡರು ರಾಜ್ಯ ಮುಖಂಡರ ಸಮ್ಮುಖದಲ್ಲಿ ಪರಸ್ಪರ ಕಿತ್ತಾಡಿಕೊಂಡು ಬಣ ರಾಜಕೀಯವನ್ನು ಹೊರ ಹಾಕಿದ್ದಾರೆ. ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡ ಘಟನೆಗಳು ಕೂಡ ನಡೆದಿದ್ದು ಕೈಕೈ ಕೂಡ ಮಿಲಾಯಿಸಿದ್ದಾರೆ ಎನ್ನಲಾಗಿದೆ.
ರಾಜ್ಯಮಟ್ಟದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣಗಳು ಬೂದಿ ಮುಚ್ಚಿದ ಕೆಂಡದಂತಿದ್ದರೆ. ಜಿಲ್ಲೆಯಲ್ಲಿ ಕಾಂಗ್ರೆಸ್, ಯುವ ಕಾಂಗ್ರೆಸ್ ಬಣಗಳಲ್ಲಿ ಬಣ ರಾಜಕೀಯ ಮಾಡುತ್ತಿರುವುದೇ ಕಿತ್ತಾಟಕ್ಕೆ ವೇದಿಕೆಯಾಗಿತ್ತು. ಇದೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಈ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಹರಿಬಿಟ್ಟು ತಮ್ಮ ಪಕ್ಷದ ಮಾನಹರಾಜು ಹಾಕಿಕೊಂಡಿದ್ದಾರೆ ಎಂದರೆ ತಪ್ಪಾಗಲಿಕ್ಕಿಲ್ಲ.
PublicNext
02/10/2022 01:44 pm