ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ಗುತ್ತಿಗೆದಾರರನ್ನ ತರಾಟೆಗೆ ತೆಗೆದುಕೊಂಡ ಶಾಸಕ ನಾಡಗೌಡ

ರಾಯಚೂರು : ಸಿಂಧನೂರು ನಗರದ ಡಾಲರ್ಸ್ ಕಾಲೋನಿ ಪ್ರವೇಶದಲ್ಲಿ ಯುಜಿಡಿ ಕಾಮಗಾರಿಗೆ ಸಂಬಂಧಿಸಿದಂತೆ ರಸ್ತೆ ಮಧ್ಯದಲ್ಲಿ ಗುಂಡಿ ಹಾಗೆ ಬಿಟ್ಟಿರುವ ವಿಚಾರಕ್ಕೆ ಗುತ್ತಿಗೆದಾರರನ್ನ ಬಾಯಿಗೆ ಬಂದಂತೆ ಬೈದು ತರಾಟೆಗೆ ತೆಗೆದುಕೊಂಡ ಶಾಸಕ ವೆಂಕಟರಾವ್ ನಾಡಗೌಡ.

ಸಿಂಧನೂರು ನಗರಸಭೆ ಸಭಾಂಗಣದಲ್ಲಿ ಇಂದು ಶಾಸಕ ವೆಂಕಟರಾವ್ ನಾಡಗೌಡ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಈ ವೇಳೆ ನಗರದ ಡಾಲರ್ಸ್ ಕಾಲೋನಿಯಲ್ಲಿ ಯುಜಿಡಿ ಕಾಮಗಾರಿಗೆ ಸಂಬಂಧಿಸಿದಂತೆ ಮುಖ್ಯ ರಸ್ತೆಯ ಮಧ್ಯ ಭಾಗದಲ್ಲಿ ಗುಂಡಿ ಅಗೆದು ಅರ್ಧಕ್ಕೆ ಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆಯಲ್ಲಿ ಯುಜಿಡಿ ವಿಚಾರ ಬಂದಾಗ ಕೆಂಡಮಂಡಲರಾದ ಶಾಸಕರು, ಗುತ್ತಿಗೆದಾರರನ್ನು ಕರೆಸಿ ಮಾಹಿತಿ ಪಡೆಯುತ್ತಿದ್ದರು. ಈ ವೇಳೆ ಮಾಹಿತಿ ಇಲ್ಲದೆ ಸಭೆಗೆ ಆಗಮಿಸಿದ ಗುತ್ತಿಗೆದಾರನನ್ನು ಏಕವಚನದಲ್ಲಿ ಬಾಯಿಗೆ ಬಂದಂತೆ ಬೈದು, ಅಲ್ಲಿ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ ದೂರುಗಳು ಸಲ್ಲಿಸುತ್ತಿದ್ದಾರೆ. ನೀವೇನು ಮಾಡುತ್ತಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.

ನನ್ನ ಮನೆಯ ಮುಂಭಾಗದ ರಸ್ತೆಯಲ್ಲಿಯೇ ಇಂತಹ ಕಳಪೆ ಕೆಲಸ ಮಾಡುತ್ತಿರುವ ನೀವು, ಇನ್ನು ನಗರದಲ್ಲಿ ಎಷ್ಟರಮಟ್ಟಿಗೆ ಗುಣಮಟ್ಟದ ಕೆಲಸ ಮಾಡುತ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿ ಆದಷ್ಟು ಬೇಗನೆ ಕಾಮಗಾರಿಯನ್ನ ಮುಗಿಸುವಂತೆ ಸೂಚನೆ ನೀಡಿದರು.

Edited By : Nagesh Gaonkar
PublicNext

PublicNext

03/10/2022 09:50 pm

Cinque Terre

27.35 K

Cinque Terre

0