ರಾಯಚೂರು: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಯಚೂರಿನಲ್ಲಿ ಮೂರೇ ಮೂರು ಕ್ಷೇತ್ರಗಳಲ್ಲಿ ಗೆದ್ದರೆ ನಾನು ಮೀಸೆ ತೆಗೆಯುತ್ತೇನೆ ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ಅವರು ಪೂರ್ವಿಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಚಾಲೆಂಜ್ ಹಾಕಿದ್ದಾರೆ.
ರಾಯಚೂರು ನಗರದಲ್ಲಿ ಜನ ಸಂಕಲ್ಪ ಯಾತ್ರೆ ಅಂಗವಾಗಿ ಪೂರ್ವಿಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಇನ್ನೂ ಈ ಒಂದು ಸಭೆಯಲ್ಲಿ ಬಿಜೆಪಿ ಶಾಸಕರು, ಮಾಜಿ ಶಾಸಕರು ಮತ್ತು ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದಂತಹ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಏನಿಲ್ಲಾ ಹರಸಾಹಸ, ಕಸರತ್ತು ಮಾಡುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಮೂರು ವಿಧಾನಸಭೆ ಕ್ಷೇತ್ರದಲ್ಲಿ ಗೆಲ್ಲಲಿ ಸಾಕು. ಒಂದು ವೇಳೆ ಮೂರು ಕ್ಷೇತ್ರ ಗೆದ್ದರೆ ನಾನು ನನ್ನ ಮೀಸೆ ಬೋಳಿಸುತ್ತೇನೆ ಎಂಬ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕಿದ್ದರೆ.
PublicNext
09/10/2022 10:59 am