ರಾಯಚೂರು : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಸೆಡ್ಡು ಹೊಡೆಯಲು ಮತ್ತು ಚುನಾವಣಾ ಪ್ರಚಾರವನ್ನು ಬಿಜೆಪಿ ಪಕ್ಷ ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ 50 ಕ್ಷೇತ್ರಗಳಲ್ಲಿ ಜನಸಂಕಲ್ಪ ಯಾತ್ರೆಯನ್ನು ಬಿಸಿಲನಾಡು ರಾಯಚೂರಿನಿಂದ ಆರಂಭಿಸಲಿದ್ದಾರೆ.
ಚುನಾವಣಾ ವರ್ಷದ ಹಿನ್ನೆಲೆ ರಾಯಚೂಯರಿನಿಂದಲೇ ಪ್ರಚಾರ ಆರಂಭಿಸುತ್ತಿರುವ ಬಿಜೆಪಿ ವಿವಿಧ ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ಬಿಜೆಪಿ ಗೆದ್ದ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕಾಂಗ್ರೆಸ್, ಜೆಡಿಎಸ್ ಕ್ಷೇತ್ರಗಳಲ್ಲಿಯೂ ಸಂಚರಿಸಲಿದ್ದು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗಳ ಜೊತೆಗೆ ಬೃಹತ್ ಸಮಾವೇಶಗಳನ್ನು ಸಹ ಹಮ್ಮಿಕೊಂಡಿದೆ.
ಜನಸಂಕಲ್ಪ ಯಾತ್ರೆಯು ಪ್ರತಿದಿನ ಎರಡು ಕ್ಷೇತ್ರಗಳಂತೆ 50 ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿದೆ. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಜನಸಂಕಲ್ಪ ಯಾತ್ರೆ ಆರಂಭವಾಗಲಿದ್ದು, ಯಾತ್ರೆಯು ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಂತೆ ಸಂಚರಿಸಲಿದೆ.
Kshetra Samachara
11/10/2022 08:37 am