ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು : ಮತದಾರರನ್ನು ಸೆಳೆಯಲು ಬಿಜೆಪಿ ಸಜ್ಜು

ರಾಯಚೂರು : 2023ರ ವಿಧಾನಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ಬಿಜೆಪಿ ಸಜ್ಜಾಗಿದೆ. ಬಿಜೆಪಿ ಜನಸ್ಪಂದನ ಯಾತ್ರೆಗೆ ಭರ್ಜರಿ ಸಿದ್ಧತೆಯನ್ನು ಗಿಲ್ಲೆಸೂಗುರು ಮಾಡಿದ್ದು, ಬಿಜೆಪಿಯ ಬೃಹತ್ ಸಮಾವೇಶಕ್ಕೆ ಇಂದು ಸಿಎಂ, ಮಾಜಿ ಸಿಎಂ ಚಾಲನೆ ನೀಡಲಿದ್ದಾರೆ.

ಹೌದು ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗಿಲ್ಲೆಸೂಗುರು ಗ್ರಾಮದಲ್ಲಿ ನಡೆಯಲಿರುವ ಜನಸ್ಪಂದನಾ ಯಾತ್ರೆ ಮಧ್ಯಾಹ್ನ 12:15ಕ್ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಚಾಲನೆ ದೊರೆಯಲಿದೆ. ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ BS ಯಡಿಯೂರಪ್ಪ ನೇತೃತ್ವದಲ್ಲಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಒಂದು ಸಮಾವೇಶದಲ್ಲಿ 50ಸಾವಿರ ಜನ ಸೇರುವ ನಿರೀಕ್ಷೆಯಿಂದ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹಲವು ಜನಪರ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಹಿನ್ನಲೆಯಲ್ಲಿ ಸಮಾವೇಶ ಆಯೋಜಿಸಲಾಗಿದೆ.

ಗಿಲ್ಲೆಸೂಗೂರು ಗ್ರಾಮದಲ್ಲಿ ಈಗಾಗಲೇ ಎಲ್ಲಾ ಸಿದ್ಧತೆಯಾಗಿದೆ. ಸಮಾವೇಶಕ್ಕೆ ವೇದಿಕೆ ಸಿದ್ಧಮಾಡಲಾಗಿದ್ದು ಅಂತಿಮ ರೂಪರೇಷೆ ಮಾಡಲಾಗುತ್ತಿದೆ. ಇನ್ನೂ ಕಾರ್ಯಕ್ರಮದಲ್ಲಿ ಬಿಜೆಪಿಯ ಹಲವು ಶಾಸಕರು, ಸಚಿವರು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Edited By : Shivu K
PublicNext

PublicNext

11/10/2022 10:21 am

Cinque Terre

21.88 K

Cinque Terre

0