ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು : ರಾಯಚೂರಿನಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಒತ್ತಾಯ

ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ರಾಷ್ಟ್ರೀಯ ಜವಳಿ ಪಾರ್ಕ್ ಸ್ಥಾಪನೆ ಸಂಬಂಧ ತಕ್ಷಣ ಕ್ರಮಕ್ಕೆ ಮುಂದಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ಅವರು ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಗುಣಮಟ್ಟದ ಹತ್ತಿ ಉತ್ಪಾದನೆಯಲ್ಲಿ ರಾಯಚೂರ ಜಿಲ್ಲೆ ಹೆಸರಾಗಿದೆ. ಸಾಕಷ್ಟು ರೆವಿನ್ಯೂ ಇದರಿಂದ ಸರ್ಕಾರಕ್ಕೆ ಸಂದಾಯವಾಗುತ್ತದೆ. ಇಲ್ಲಿನ ಹತ್ತಿ ಮಾರುಕಟ್ಟೆ ಏಷ್ಯಾದಲ್ಲೇ ದೊಡ್ಡದಿದೆ. ಇದನ್ನು ಸರ್ಕಾರ ಮನಗಾಣಬೇಕು. ತಕ್ಷಣ ರಾಷ್ಟ್ರೀಯ ಜವಳಿ ಪಾರ್ಕ್ ಸ್ಥಾಪನೆಗೆ ಚಟುವಟಿಕೆ ನಡೆಸಲು ನಾಳೆ ರಾಯಚೂರಿಗೆ ಆಗಮಿಸುತ್ತಿರುವ ಸಿಎಂ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗುವುದು. ರಾಯಚೂರು ರಿಮ್ಸ್ ಆಸ್ಪತ್ರೆಯನ್ನು ಅತ್ಯಾಧುನಿಕವಾದ ವೈದ್ಯಕೀಯ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಾಗಿ ಮೇಲ್ದರ್ಜೆಗೇರಿಸಲು ಆಗ್ರಹಿಸಿದರು.

ಅಲ್ಲದೇ ಪಕ್ಕದ ಯಾದಗಿರಿ ಜಿಲ್ಲೆಯ ಕಡೇಚೂರಲ್ಲಿ ಫಾರ್ಮಾ ಪಾರ್ಕ್ ಸ್ಥಾಪಿಸುವಂತೆ ಒತ್ತಾಯಿಸಿದ ಬಾಬುರಾವ್ ಅವರು ಸ್ಥಾಪನೆ ಸಂಬಂಧ ಸರ್ವೇ ನಡೆಸಿದ ವರದಿ ಇದೆ. ಇಲ್ಲಿ ಫಾರ್ಮಾ ಪಾರ್ಕ್ ಸ್ಥಾಪನೆಗೆ ಸಾಕಷ್ಟು ಸರ್ಕಾರದ ಜಾಗ ಇದೆ ಎಂದು ಗಮನಕ್ಕೆ ತರಲಾಗುವುದು ಎಂದರು.

Edited By :
PublicNext

PublicNext

10/10/2022 08:14 pm

Cinque Terre

32.83 K

Cinque Terre

0